ಆಂಧ್ರಪ್ರದೇಶದಲ್ಲಿ ಭೀಕರ ರೈಲು ಅಪಘಾತ : ಸಾವಿನ ಸಂಖ್ಯೆ 14 ಕ್ಕೆ ಏರಿಕೆ

ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯ ಕೊಥವಲಸ ಮಂಡಲದ ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಸಿಗ್ನಲ್ ಗಾಗಿ ನಿಂತಿತು. ಅದೇ ಟ್ರ್ಯಾಕ್ನಲ್ಲಿ ಬಂದ ಪಲಾಸಾ ಎಕ್ಸ್ಪ್ರೆಸ್ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ.

ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಯಿತು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read