BIG NEWS : ಆಂಧ್ರಪ್ರದೇಶ ರೈಲು ಅಪಘಾತ : ಮೃತರ ಕುಟುಂಬದವರಿಗೆ ತಲಾ 12 ಲಕ್ಷ ರೂ. ಪರಿಹಾರ ಘೋಷಣೆ

ಆಂಧ್ರಪ್ರದೇಶ : ಆಂಧ್ರಪ್ರದೇಶ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬದವರಿಗೆ ಆಂಧ್ರಪ್ರದೇಶ ಸಿಎಂ ತಲಾ 12 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದು, ಮೃತರಿಗೆ 10 ಲಕ್ಷ ರೂಪಾಯಿ ಹಾಗೂ ಪ್ರಧಾನ ಮಂತ್ರಿ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ . ಆಂಧ್ರಪ್ರದೇಶದಲ್ಲಿ ರೈಲು ದುರಂತ ( Train Accident) ನಡೆದ ಹಿನ್ನೆಲೆ ಪರಿಣಾಮ 12 ರೈಲುಗಳ ಸಂಚಾರ ರದ್ದಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read