HomeLatest Newsಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ: ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ

ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ: ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ

ಹೈದರಾಬಾದ್: ವಾಯುಭಾರ ಕುಸಿತವಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ.

ಆಂಧ್ರಪ್ರದೇಶದ ವಿವಿಧೆಡೆ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಶ್ರೀಕಾಕುಳಂ, ವಿಜಯನಗರ, ಪಾರ್ವತಿಪುರಂ ಮಾನ್ಯಂ, ಅಲ್ಲೂರಿ ಸೀತಾರಾಮರಾಜು, ಪೊಲಾವರಂ, ವಿಶಾಖಪಟ್ಟಣಂ, ಅನಕಾಪಲ್ಲಿ, ಕಾಕಿನಾಡ, ಕೋನಸೀಮ, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಏಲೂರು ಜಿಲ್ಲೆಗಳ ಎನ್‌ಟಿಆರ್‌ ಹಾಗೂ ಏಲೂರು ಸುತ್ತಮುತ್ತಲಿನ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬಾಪಟ್ಲಾ, ಪಲ್ನಾಡು, ಮಾರ್ಕಪುರಂ, ಪ್ರಕಾಶಂ ಮತ್ತು ನೆಲ್ಲೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮಳೆ ಸಂದರ್ಭದಲ್ಲಿ ಜನರು ಜಾಗೃತೆ ವಹಿಸುವಂತೆ ಸೂಚಿಸಲಾಗಿದೆ. ಹೊಲ-ಗದ್ದೆಗಳಲ್ಲಿ, ತೆರೆದ ಸ್ಥಳಗಳಲ್ಲಿ ಹಾಗೂ ಮರಗಳ ಕೆಳಗೆ ನಿಲ್ಲದಂತೆ ತಿಳಿಸಲಾಗಿದೆ.

ಗಂಟೆಗೆ ಸುಮಾರು 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಮರಾವತಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇತ್ತೀಚೆಗೆ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದ ಭತ್ತ, ಹತ್ತಿ ಸೇರಿದಂತೆ ಇತರ ಬೆಳೆಗಳು ಹಾನಿಯಾಗಿದ್ದು, ರೈತರು ನಷ್ಟಕ್ಕೊಳಗಾಗಿದ್ದಾರೆ. ಕೆಲವು ಹಳ್ಳಿಗಳಲ್ಲಿ ಬಿದ್ದ ಅಕಾಲಿಕ ಮಳೆಯಿಂದಾಗಿ ಸುಮಾರು 2,300 ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಮತ್ತು 350 ಎಕರೆ ಪ್ರದೇಶದಲ್ಲಿ ಹತ್ತಿ ಬೆಳೆ ಹಾನಿಯಾಗಿದೆ ಎಂದು ಕೃಷಿ ಅಧಿಕಾರಿಗಳು ಅಂದಾಜಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular