HomeIndiaಪತ್ನಿ ಮೇಲೆ ಹಲ್ಲೆ ನಡೆಸಿ ಕಾಲು ಕತ್ತರಿಸಿ ಚೀಲದಲ್ಲಿ ತುಂಬಿಕೊಂಡು ಪೊಲೀಸ್ ಠಾಣೆಗೆ ಬಂದು ಶರಣಾದ...

ಪತ್ನಿ ಮೇಲೆ ಹಲ್ಲೆ ನಡೆಸಿ ಕಾಲು ಕತ್ತರಿಸಿ ಚೀಲದಲ್ಲಿ ತುಂಬಿಕೊಂಡು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಪಲ್ನಾಡು: ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿ ಬಳಿಕ ಆಕೆಯ ಕಾಲುಗಳನ್ನು ಕತ್ತರಿಸಿ ಚೀಲದಲ್ಲಿ ತುಂಬಿ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ.

ಕೌಟುಂಬಿಕ ಕಲಹಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಅಳಿಕ ಆಕೆಯ ಕಾಲು ಕತ್ತರಿಸಿ ಚೀಲದಲ್ಲಿಟ್ಟು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಆಂಧ್ರದ ಪಲ್ನಾಡು ಜಿಲ್ಲೆಯ ಮುಪ್ಪಳ್ಳ ಮಂಡಲದ ಥೋಂಡಪಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಲ್ಲೆಪು ಲಕ್ಷ್ಮಯ್ಯ ಬಂಧಿತ ಆರೋಪಿ. ಭೂಲಕ್ಷ್ಮಿ ಹಲ್ಲೆಗೊಳಗಾದ ಪತ್ನಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೊಂಡಪಿ ಗ್ರಾಮದ ಬಿ.ಸಿ.ಕಾಲೊನಿಯ ನಿವಾಸಿಗಳಾದ ಲಕ್ಷ್ಮಯ್ಯ ಮತ್ತು ಭೂಲಕ್ಷ್ಮಿ ಹಲವು ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಐದು ಮಂದಿ ಹೆಣ್ಣು ಮಕ್ಕಳಿದ್ದಾರೆ. ಭೂಲಕ್ಷ್ಮಿ ಟೈಲರಿಂಗ್ ಮಾಡುತ್ತಿದ್ದರೆ, ಲಕ್ಷ್ಮಯ್ಯ ಕೃಷಿಯಲ್ಲಿ ಕೆಲಸ ಮಾಡುತ್ತಿದ್ದ. ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ. ಲಕ್ಷ್ಮಯ್ಯ ಪತ್ನಿ ಮೇಲೆ ಅನುಮಾನಪಡುತ್ತಿದ್ದ. ಹೀಗಾಗಿ, ಮನೆಯಲ್ಲಿ ಪದೇ ಪದೇ ಜಗಳ ನಡೆಯುತ್ತಿದ್ದವು.

ಗುರುವಾರ ಕೂಡ ಪತಿ-ಪತ್ನಿ ನಡುವೆ ಜಗಳವಾಗಿದೆ. ಭೂಲಕ್ಷ್ಮಿ ಮನೆಯಿಂದ ಹೊರ ಹೋಗಲು ಸಿದ್ಧವಾದಾಗ ಕೋಪಗೊಂಡ ಲಕ್ಷ್ಮಯ್ಯ, ಮನೆಯಲ್ಲಿದ್ದ ಕೊಡಲಿ ತೆಗೆದುಕೊಂಡು ಆಕೆಯ ಬಲಗಾಲನ್ನು ಕತ್ತರಿಸಿದ್ದಾನೆ. ಕೃತ್ಯದ ಬಳಿಕ ಕತ್ತರಿಸಿದ ಕಾಲನ್ನು ಚೀಲದಲ್ಲಿ ತುಂಬಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ತೀವ್ರ ಗಾಯ ಮತ್ತು ಭಾರೀ ರಕ್ತಸ್ರಾವದಿಂದ ಬಳಲುತ್ತಿದ್ದ ಭೂಲಕ್ಷ್ಮಿಯನ್ನು ಮೊದಲು ಸತ್ತೇನಪಳ್ಳಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಗುಂಟೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಆರೋಪಿ ಬಮ್ಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular