ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ಮೂಲದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕ್ರೂಸರ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕ್ರೂಸರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಧ್ರದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತೆರಳಿ ಸ್ವಗ್ರಾಅಮಕ್ಕೆ ವಾಪಸ್ ಆಗುತ್ತಿದ್ದಾಗ ಈ ದುರಾಂತ ಸಂಭವಿಸಿದೆ.
ಮೃತರನ್ನು ಅಜೀತ ಸಾತ್ವಾರ (28), ಗೌರವ ಶಹಾ (42), ಅಲಕಾ ಸಿಂಧೆ, (60) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬೆಳಗಾವಿ ತಾಲ್ಲೂಕಿನ ಯಕ್ಸಂಬಾ ಪಟ್ಟಣದವರು ಎಂದು ತಿಳಿದುಬಂದಿದೆ.
ಆಂಧ್ರಪ್ರದೇಶದ ಮಾರಕಾಪೂರ ಜಿಲ್ಲೆಯ ಕಂಬಾಮಾ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

