ಮಂಗಲಗಿರಿ: ಹಾಸ್ಟೆಲ್ ಊಟ ಸೇವಿಸಿದ್ದ 25 ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ತೀವ್ರ ಅಸ್ವಸ್ಥರಾಗಿರುವ ಘಟನೆ ಆಂಧ್ರಪ್ರದೇಶದ ಮಂಗಲಗಿರಿಯಲ್ಲಿರುವ ಏಮ್ಸ್ ಹಾಸ್ಟೆಲ್ ನಲ್ಲಿ ನಡೆದಿದೆ.
ಹಾಸ್ಟೆಲ್ ಊಟ ಸೇವಿಸಿದ ಬಳಿ ವಿದ್ಯಾರ್ಥಿಗಳು ಹಾಗೂ ಸಿಬಂದಿಗಳಿಗೆ ವಾಂತಿ, ಬೇಧಿ, ಡಯೇರಿಯಾ ಶುರುವಾಗಿದ್ದು, ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳನ್ನು ಏಮ್ಸ್ ಆಸ್ಪತ್ರೆಯ ವಿಶೇಷ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೇಲ್ನೋಟಕ್ಕೆ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿರುವಂತೆ ಕಂಡು ಬರುತ್ತಿದೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಚಿಕಿತ್ಸೆ ಮುಂದುವರೆದಿದೆ.

