HomeLatest Newsಆಂಧ್ರಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ ಕೊರೊನಾ ಸೋಂಕು: 20 ದಿನಗಳಲ್ಲಿ ನಾಲ್ವರು ಕೋವಿಡ್ ಗೆ ಬಲಿ; ಕರ್ನಾಟಕದ...

ಆಂಧ್ರಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ ಕೊರೊನಾ ಸೋಂಕು: 20 ದಿನಗಳಲ್ಲಿ ನಾಲ್ವರು ಕೋವಿಡ್ ಗೆ ಬಲಿ; ಕರ್ನಾಟಕದ ಗಡಿಯಲ್ಲಿ ಹೈ ಅಲರ್ಟ್

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕಳೆದ 20 ದಿನಗಳಲ್ಲಿ ಕೊರೊನಾಗೆ ನಾಲ್ವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕಿನನ ಬೆನ್ನಲ್ಲೇ ಎಚ್ಚೆತ್ತ ಆಂಧ್ರಪ್ರದೇಶ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಇತರ ಕಾಯಿಲೆಗಳಿರುವ ನಾಲ್ವರಲ್ಲಿಯೂ ಕೊರೊನಾ ಸೋಂಕು ಪತ್ತೆಯಾಗಿದೆ, 12 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಆಂಧ್ರಪ್ರದೇಶದಲ್ಲಿ ಜೂನ್ 26ರಂದು ಮೊದಲ ಕೊರೊನಾ ಕೇಸ್ ಪತ್ತೆಯಾಗಿತ್ತು. ಜುಲೈ 16ರವರೆಗೆ ಕೊರೊನಾಗೆ ನಾಲ್ವರು ಬಲಿಯಾಗಿದ್ದಾರೆ. ಇತರ ಕಾಯಿಲೆ ಇರುವವರೇ ಹೆಚ್ಚಾಗಿ ಕೊರಿನಾ ಸೋಂಕಿಗೆ ಬಲಿಯಾಗುತ್ತಿದ್ದಾರೆ.

ಕಡಪದಲ್ಲಿ ಮೂವರು ಕೋವಿಡ್ ನಿಂದ ಮೃತಪಟ್ಟಿದ್ದರೆ, ಕಾಕಿನಾಡಿನಲ್ಲಿ ಓರ್ವರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಜುಲೈ 16ರವರೆಗೆ ಒಟ್ಟು 12 ಜನರಲ್ಲಿ ಸೋಂಕು ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಂಧ್ರಪ್ರದೇಶದಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ- ಆಂಧ್ರ ಗಡಿ ಜಿಲ್ಲೆ ತುಮಕೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೊರೊನಾ ಹರಡುವ ಭೀತಿಯಿಂದ ಅಗತ್ಯ ಮುನ್ನೆಚ್ಚರಿಕ ಅಕ್ರಮ ಕೈಗೊಳ್ಳಲಾಗಿದೆ.

ಪಾವಗಡದ ತಾಲೂಕು ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಪ್ರತ್ಯೇಕ ವಾರ್ಡ್ ಗಳಲ್ಲಿ 20 ಹಾಸಿಗೆ, ಆಕ್ಸಿಜನ್ ಮೀಸಲಿಡಲಾಗಿದೆ. ಕೋವಿಡ್ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular