HomeKarnatakaBIG NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಕೇಸ್; ಮುಖ್ಯ ಶಿಕ್ಷಕಿ ಅರೆಸ್ಟ್

BIG NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಕೇಸ್; ಮುಖ್ಯ ಶಿಕ್ಷಕಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮೀ ದೇವಮ್ಮ ಬಂಧಿತರಾಗಿರುವ ಮುಖ್ಯಶಿಕ್ಷಕಿ. ಬ್ಯಾಡರಹಳ್ಳಿ ಠಾಣೆ ಪೊಲೀಸರು ಶಿಕ್ಷಕಿಯನ್ನು ಬಂಧಿಸಿದ್ದಾರೆ. ಬಿಇಒ ಆಂಜಿನಪ್ಪ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಮುಖ್ಯಶಿಕ್ಷಕಿ ಲಕ್ಷ್ಮೀ ದೇವಮ್ಮ ಅವರನ್ನು ಅರೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಕ್ಷ್ಮೀ ದೇವಮ್ಮ ಅವರನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಲಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೋಷಕರು, ಸಾರ್ವಜನಿಕರು ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular