ಅನಂತಪುರ: ತಾಯಿ ಹಾಗೂ ಮೂರು ವರ್ಷದ ಮಗ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದಿದೆ.
ತಾಯಿ ಶವದ ಪಕ್ಕದಲ್ಲಿಯೇ ಮೂರು ವರ್ಷದ ಮಗನ ಶವ ಕತ್ತು ಸೀಳಿದ ರೀತಿಯಲ್ಲಿ ಪತ್ತೆಯಾಗಿದೆ. ಇಬ್ಬರ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಮೂಲ್ಯ (30) ಮೃತ ಮಹಿಳೆ ಹಾಗೂ ಆಕೆಯ ಚಿಕ್ಕ ಮಗ ಮೂರು ವರ್ಷದ ಮಗ ಇಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಒನ್ ಟೌನ್ ಪೊಲೀಸರು ಅಮೂಲ್ಯ ಪತಿ ರವಿಯನ್ನು ವಿಚಾರಣೆ ನಡೆಸಿದ್ದಾರೆ. ರವಿ ರಾಮಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
