BREAKING : ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಿಐಡಿ ತನಿಖೆಗೆ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನರು ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತ ದುರದೃಷ್ಟಕರ. ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗುವುದು ಎಂದು ತಿಳಿಸಿದರು.

ದುರಂತದಲ್ಲಿ 14 ಜನರು ಸಜೀವ ದಹನಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಗೋಡೌನ್ ನಲ್ಲಿ ಕೆಲಸ ಮಾಡುತ್ತಿದ್ದವರಲ್ಲಿ ಹಲವರು ವಿದ್ಯಾರ್ಥಿಗಳು. ರಜೆ ಸಮಯದಲ್ಲಿ ದುಡಿಮೆಗಾಗಿ ಇಲ್ಲಿಗೆ ಬಂದಿದ್ದಾರೆ. ಈ ಘಟನೆ ನಡೆದಿರುವುದು ದು:ಖಕರ. ಪ್ರಕರಣ ಸಂಬಂಧ ಈಗಾಗಲೇ ಪಟಾಕಿ ಗೋಡೌನ್ ಮಾಲೀಕ ರಾಮಸ್ವಾಮಿ ರೆಡ್ಡಿ, ಪುತ್ರ ನವೀನ್, ಕಟ್ಟಡದ ಮಾಲೀಕ ಅನಿಲ್ ನನ್ನು ಬಂಧಿಸಲಾಗಿದೆ.

ತಮಿಳುನಾಡಿನಿಂದ ಟ್ರಕ್ ನಲ್ಲಿ ಪಟಾಕಿಯನ್ನು ತರಲಾಗಿದೆ. ಶನಿವಾರ ಮಧ್ಯಾಹ್ನ 3.15 ರಿಂದ 3.30ರ ಸಮಯದಲ್ಲಿ ಈ ದುರಂತ ಸಂಭವಿಸಿದೆ ಎಂದರು.

ಬೆಂಕಿ ದುರಂತಕ್ಕೆ ನಿಖರವಾಗಿ ಕಾರಣ ಇನ್ನೂ ತಿಳಿದುಬಂದಿಲ್ಲ. ವಿದ್ಯುತ್ ತಂತಿ ಅಥವಾ ಯುಪಿಎಸ್ ನಿಂದ ಘಟನೆ ನಡೆದಿರಬಹುದು ಎನ್ನಲಾಗುತ್ತಿದೆ. ಗೋಡೌನ್ ನಲ್ಲಿ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ ಎಂಬ ಬಗ್ಗೆಯೂ ಮಾಹಿತಿ ಇದೆ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read