HomeKarnatakaವಿವಿಧ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ, ಭೇಟಿಗೂ ಮುನ್ನ ತಿಳಿಯಿರಿ

ವಿವಿಧ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ, ಭೇಟಿಗೂ ಮುನ್ನ ತಿಳಿಯಿರಿ

ಇಂದು ದೇಶದಾದ್ಯಂತ ಅನೇಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು, ದೇವಸ್ಥಾನಗಳು, ಗುರುದ್ವಾರಗಳು, ಚರ್ಚುಗಳು, ಮಸೀದಿಗಳು ಸೇರಿದಂತೆ ವಿವಿಧ ಪ್ರಾರ್ಥನಾ ಸ್ಥಳಗಳು, ಖಾಸಗಿ ಸಂಸ್ಥೆಗಳು, ಶಾಲಾ–ಕಾಲೇಜುಗಳು, ನ್ಯಾಯಾಲಯಗಳು, ಪೊಲೀಸ್ ಇಲಾಖೆ ಮುಂತಾದೆಡೆಗಳಲ್ಲಿ ಶಿಷ್ಟ ಹಾಗೂ ಸಂಯಮಿತ ವೇಷಭೂಷಣ ಪಾಲನೆ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ದೇವಸ್ಥಾನಗಳ ಪಾವಿತ್ರ್ಯತೆ, ಸಂಸ್ಕೃತಿಯ ಗೌರವ ಮತ್ತು ಶಿಸ್ತುಬದ್ಧ ವಾತಾವರಣವನ್ನು ಕಾಪಾಡುವ ಉದ್ದೇಶದಿಂದ, ದೇವಸ್ಥಾನಗಳಿಗೆ ಬರುವ ಭಕ್ತರು ಯೋಗ್ಯ ವೇಷಭೂಷಣವನ್ನು ಧರಿಸುವಂತೆ ಜಾಗೃತಿ ಮೂಡಿಸುವ ಕಾರ್ಯವನ್ನು ಕರ್ನಾಟಕ ಮಂದಿರ ಮಹಾಸಂಘದಿಂದ ಕೈಗೊಳ್ಳಲಾಗಿದೆ.

ಈ ದಿಶೆಯಲ್ಲಿ ಚಂದಾಪುರದಲ್ಲಿರುವ ಪ್ರಸಿದ್ಧ ದೇವಸ್ಥಾನಗಳಾದ ಶ್ರೀಕೋದಂಡರಾಮ ದೇವಸ್ಥಾನ, ಬನಹಳ್ಳಿಯ ದಕ್ಷಿಣ ಮುಖ ಶ್ರೀಆಂಜನೇಯ ಸ್ವಾಮಿ ದೇವಸ್ಥಾನ, ಹಾಗೂ ಯಾರಂಡಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ವಸ್ತ್ರ ಸಂಹಿತೆಯ ಕುರಿತು ಸೂಚನಾ ಫಲಕಗಳನ್ನು ಅಳವಡಿಸಿ, ಭಕ್ತರಲ್ಲಿ ಅರಿವು ಮೂಡಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವಾಲಯಗಳು ಭಕ್ತಿಯ ಮತ್ತು ಸಾತ್ವಿಕತೆಯ ಕೇಂದ್ರಗಳಾಗಿರುವುದರಿಂದ, ಭಕ್ತರು ತುಂಡು ಅಥವಾ ಅಸಂಗತ ಉಡುಪುಗಳನ್ನು ತೊರೆದು, ಭಾರತೀಯ ಸಂಸ್ಕೃತಿಗೆ ತಕ್ಕಂತೆ ವೇಷಭೂಷಣ ಧರಿಸಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಜೊತೆ ಸಹಕರಿಸಬೇಕೆಂದು ವಿನಂತಿಸಲಾಗಿದೆ.

ಸಾತ್ವಿಕ ಉಡುಪುಗಳು: ಮಹಿಳೆಯರು ಚೂಡಿದಾರ, ಲಂಗ–ದಾವಣಿ, ಸಲ್ವಾರ್–ಕುರ್ತಾ, ಸೀರೆ ಮುಂತಾದ ಪಾರಂಪರಿಕ ಮತ್ತು ಸಾತ್ವಿಕ ವೇಷಭೂಷಣಗಳನ್ನು ಧರಿಸಬೇಕು.

ಪುರುಷರು ಕುರ್ತಾ, ಧೋತಿ, ಲುಂಗಿ, ಪೈಜಾಮ ಅಥವಾ ಸಾಮಾನ್ಯ ಶರ್ಟ್–ಪ್ಯಾಂಟ್ ಧರಿಸುವುದು ಸೂಕ್ತವಾಗಿದೆ.

ಅನರ್ಹ ಉಡುಪುಗಳು: ಪಾಶ್ಚಾತ್ಯ ಶೈಲಿಯ ಸ್ಕರ್ಟ್, ಮಿಡಿ, ಶಾರ್ಟ್ ಪ್ಯಾಂಟ್, ಸ್ಯಾಂಡೋ ವೆಸ್ಟ್, ಜೀನ್ಸ್, ಸ್ಲೀವ್‌ಲೆಸ್ ಡ್ರೆಸ್, ನೈಟ್ ಡ್ರೆಸ್, ಸಾಕ್ಸ್ ಮುಂತಾದ ಉಡುಪುಗಳನ್ನು ದೇವಸ್ಥಾನ ಪ್ರವೇಶದ ವೇಳೆ ಧರಿಸದಂತೆ ಭಕ್ತರಲ್ಲಿ ವಿನಂತಿಸಲಾಗುತ್ತದೆ.

ಭಕ್ತರು ಈ ವಸ್ತ್ರ ಸಂಹಿತೆಯನ್ನು ಸ್ವಯಂ ಪ್ರೇರಣೆಯಿಂದ ಪಾಲಿಸಿ, ದೇವಾಲಯಗಳ ಸಾಂಸ್ಕೃತಿಕ ಹಾಗೂ ಧಾರ್ಮಿಕ ಮೌಲ್ಯಗಳ ರಕ್ಷಣೆಗೆ ಕೈಜೋಡಿಸಬೇಕೆಂದು ಕರ್ನಾಟಕ ಮಂದಿರ ಮಹಾಸಂಘ ಮನವಿ ಮಾಡಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular