HomeLatest NewsBIG NEWS: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆರೆಗೆ ಬಿದ್ದ ಜಲ್ಲಿಕಲ್ಲು ತುಂಬಿದ್ದ ಲಾರಿ: ಚಾಲಕ ನಾಪತ್ತೆ

BIG NEWS: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆರೆಗೆ ಬಿದ್ದ ಜಲ್ಲಿಕಲ್ಲು ತುಂಬಿದ್ದ ಲಾರಿ: ಚಾಲಕ ನಾಪತ್ತೆ

ಬೆಂಗಳೂರು: ರಸ್ತೆಗುಂಡಿ ತಪ್ಪಿಸಲು ಹೋಗಿ ಜಲ್ಲಿಕಲ್ಲು ತುಂಬಿದ್ದ ಲಾರಿಯೊಂದು ಕೆರೆಗೆ ಬಿದ್ದಿದ್ದು, ಚಾಲಕ ನಾಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸರ್ಜಾಪುರ ರಸ್ತೆಯಲ್ಲಿ ನಡೆದಿದೆ.

ಆನೇಕಲ್ ನ ಬಿದರಗುಪ್ಪೆ ಕೆರೆಯಲ್ಲಿ ಈ ಘಟನೆ ನಡೆದಿದೆ. ಚಾಲಕ ಕೆರೆಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಚಾಲಕ ಕಲಬುರಗಿ ಮೂಲದ ಮಹೇಶ್ (37) ಎಂದು ತಿಳಿದುಬಂದಿದೆ.

ಜಲ್ಲಿಕಲ್ಲು ತುಂಬಿದ್ದ 12 ಚಕ್ರದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಘಟನಾಸ್ಥಳಕ್ಕೆ ಪೊಲೀಸರು, ಮುಳುಗು ತಜ್ಞರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕ್ರೇನ್ ಬಳಸಿ ಲಾರಿ ಮೇಲಕೆತ್ತಲು ಯತ್ನಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular