HomeKarnatakaBREAKING: ಡ್ರಾಪ್ ಕೊಡುವ ನೆಪದಲ್ಲಿ ವೃದ್ಧನ ರಾಬರಿ: ತಲೆಗೆ ಸುತ್ತಿಗೆಯಿಂದ ಹೊಡೆದು ಚಿನ್ನಾಭರಣ ದೋಚಿ ಪರಾರಿಯಾದ...

BREAKING: ಡ್ರಾಪ್ ಕೊಡುವ ನೆಪದಲ್ಲಿ ವೃದ್ಧನ ರಾಬರಿ: ತಲೆಗೆ ಸುತ್ತಿಗೆಯಿಂದ ಹೊಡೆದು ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು

ಆನೇಕಲ್: ರಾಜ್ಯದಲ್ಲಿ ಹಾಡ ಹಗಲೇ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವೃದ್ಧರೊಬ್ಬರಿಗೆ ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ಸುತ್ತಿಗೆಯಿಂದ ತಲೆಗೆ ಹೊಡೆದು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ನಡೆದಿದೆ.

68 ವರ್ಷದ ನಾಗರಾಜ್ ಬಳಿಯಿಂದ ಕಳ್ಳರ ಗ್ಯಾಂಗ್ ಚಿನ್ನಾಭರಣ ದೋಚಿ ಪರಾರಿಯಾಗಿದೆ. ಡ್ರಾಪ್ ಕೊಡುತ್ತೇವೆ ಎಂದು ಕರೆದೊಯ್ದ ಬಳಿಕ ನಾಗರಾಜ್ ಅವರ ತಲೆಗೆ ಸುತ್ತಿಗೆಯಿಂದ ಹೊಡೆದಿದ್ದಾರೆ. ಅವರ ಬಳಿ ಇದ್ದ ಚಿನ್ನಾಭರಣಗಳನ್ನು ರಾಬರಿ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಆನೇಕಲ್ ತಾಲೂಕಿನ ಸೂರ್ಯಸಿಟಿ ಬಳಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular