BREAKING : ಅತ್ತಿಬೆಲೆ ಪಟಾಕಿ ಗೋದಾಮು ದುರಂತ : ಐವರ ವಿರುದ್ಧ ‘FIR’ ದಾಖಲು

ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನವಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೃತ ವ್ಯಕ್ತಿಯ ಸಂಬಂಧಿ ಲೋಕೇಶ್ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಐಪಿಸಿ ಸೆಕ್ಷನ್ 427, 285, 286, 304, 337, 338 ಎಕ್ಸ್ ಪ್ಲೋಸಿವ್ ಆಕ್ಟ್ ಅಡಿ ಒಟ್ಟು ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ಒಂದರಲ್ಲಿ ನಿನ್ನೆ ಸಂಜೆ ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ಗೋಡೌನ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿತ್ತು. ದುರಂತದಲ್ಲಿ 14 ಜನರು ಸಜೀವ ದಹನವಾಗಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read