HomeLatest NewsBREAKING: ಶಿಕ್ಷಕಿ ಬೈದಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

BREAKING: ಶಿಕ್ಷಕಿ ಬೈದಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಆನೇಕಲ್: ಶಿಕ್ಷಕಿ ಬೈದಿದ್ದಕ್ಕೆ ಮನನೊಂದ 8 ನೇ ತರಗತಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಧುಶ್ರೀ ಸಾವಿಗೆ ಶರಣಾದ ದುರ್ದೈವಿ. ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಬಿಗಿದುಕೊಂಡು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ಬೆಳಿಗ್ಗೆ ಪೋಷಕರು ಎದ್ದು ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಸಾಅವಿಗೂ ಮುನ್ನ ವಿದ್ಯಾರ್ಥಿನಿ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ನನಗೆ ಶಾಲೆಯಲ್ಲಿ ನಡೆದ ಘಟನೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದ್ದಾರೆ. ನನಗೆ ಅವಮಾನ ಮಾಡಿದ್ದಾರೆ. ನನಗೆ ಅವಮಾನ ಸಹಿಸಿಕೊಂಡು ಬದುಕಲು ಆಗುತ್ತಿಲ್ಲ. ನನ್ನ ಮನಸ್ಸಿಗೆ ತುಂಬಾ ನೋವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾಳೆ. ಅಲ್ಲದೇ ಡೆತ್ ನೀಟ್ ನಲ್ಲಿ ಹಲವು ವಿಚಾರಗಳನ್ನು ಬರೆದಿಟ್ಟಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿ ಸಾವಿನ ಹಿನ್ನೆಲೆಯಲ್ಲಿ ಘಟನ ಅಸ್ಥಳಕ್ಕೆ ಬಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಕಿರುಕುಳದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular