HomeKarnataka10 ಸಾವಿರ ಅಂಗನವಾಡಿ ಮೇಲ್ದರ್ಜೆಗೆ, ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ: ಗೌರವಧನ ಹೆಚ್ಚಳದ ಭರವಸೆ

10 ಸಾವಿರ ಅಂಗನವಾಡಿ ಮೇಲ್ದರ್ಜೆಗೆ, ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ: ಗೌರವಧನ ಹೆಚ್ಚಳದ ಭರವಸೆ

ಬೆಳಗಾವಿ: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಮೊದಲ ಹಂತದಲ್ಲಿ 10,000 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್, ಸೀರೆ, ಔಷಧ ಕಿಟ್, ತೂಕದ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿ ಸರ್ಕಾರಿ ಮಾಂಟೆಸ್ಸರಿ ನಡೆಸಲು ನಿರ್ಧರಿಸಲಾಗಿದೆ. ಕೇಂದ್ರದಿಂದ 20,000 ಸ್ಮಾರ್ಟ್ ಕ್ಲಾಸ್ ಗಳು ಮಂಜೂರಾಗಿವೆ. 15 ಸಾವಿರಕ್ಕೂ ಹೆಚ್ಚು ಪದವೀಧರ ಶಿಕ್ಷಕರು ಕೆಲಸ ಮಾಡುತ್ತಿದ್ದು, ಎಲ್ಲರಿಗೂ ತರಬೇತಿ ನೀಡಲಾಗುವುದು. ಇದಕ್ಕಾಗಿ 10 ಕೋಟಿ ರೂಪಾಯಿ ಕಾಯ್ದಿರಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ 20 ಲಕ್ಷ ರೂಪಾಯಿ ವೆಚ್ಚದಲ್ಲಿ 1000 ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಿಸಲಾಗುವುದು. ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular