HomeKarnatakaSHOCKING: ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆ ಮಾಂಗಲ್ಯ ಸರ ಕಸಿದು ಪರಾರಿ

SHOCKING: ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆ ಮಾಂಗಲ್ಯ ಸರ ಕಸಿದು ಪರಾರಿ

ಶಿವಮೊಗ್ಗ: ಅಂಗನವಾಡಿಗೆ ನುಗ್ಗಿದ ಕಳ್ಳನೊಬ್ಬ ಕಾರ್ಯಕರ್ತೆಯ ಮಾಂಗಲ್ಯ ಸರ ಕಸಿದು ಪರಾರಿಯಾದ ಘಟನೆ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.

ಆಗಸ್ಟ್ 22ರಂದು ತಾಲೂಕಿನ ಪುರುಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬೈಲ್ ನಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ದ ಕಳ್ಳನೊಬ್ಬ ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆ ಶ್ರೀಮತಿ ಅವರನ್ನು ಬೆದರಿಸಿ 42 ಗ್ರಾಂ ತೂಕದ 3.20 ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾನೆ.

ಘಟನೆಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಹೊಸನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular