HomeKarnatakaಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಮೊಟ್ಟೆ ಖರೀದಿಗೆ ಕೇಂದ್ರೀಕೃತ ಟೆಂಡರ್

ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಮೊಟ್ಟೆ ಖರೀದಿಗೆ ಕೇಂದ್ರೀಕೃತ ಟೆಂಡರ್

ಬೆಂಗಳೂರು: ರಾಜ್ಯದ ಹಲವೆಡೆ ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಕಳಪೆ ಮೊಟ್ಟೆ ಅಕ್ರಮ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ,

ವಿಭಾಗವಾರು ಬದಲಿಗೆ ಕೇಂದ್ರೀಕೃತ ಟೆಂಡರ್ ವ್ಯವಸ್ಥೆಯಡಿ ಮೊಟ್ಟೆ ಖರೀದಿಸಿ ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ 2023 -24ನೇ ಸಾಲಿನಲ್ಲಿ ಸಮಗ್ರ ಶಿಶು ಅಭಿವೃದ್ಧಿ ಮತ್ತು ಮಾತೃಪೂರ್ಣ ಯೋಜನೆಯಡಿ ರಾಜ್ಯದ ಅಂಗನವಾಡಿಗಳಲ್ಲಿ ಆರು ತಿಂಗಳಿಂದ ಆರು ವರ್ಷದ ಮಕ್ಕಳು ಹಾಗೂ ಗರ್ಭಿಣಿಯರು, ಬಾಣಂತಿಯರಿಗೆ ಮೊಟ್ಟೆ ಪೂರೈಕೆಗೆ ಕೇಂದ್ರೀಕೃತ ಟೆಂಡರ್ ಪ್ರಕ್ರಿಯೆ ಮೂಲಕ ಪ್ರತಿ ಮೊಟ್ಟೆಗೆ ಆರು ರೂಪಾಯಿಗೆ ಕಡಿಮೆಯಾಗದಂತೆ ಒಟ್ಟು 297.19 ಕೋಟಿ ರೂಪಾಯಿ ವೆಚ್ಚ ಮಾಡಲು ಸಭೆ ಒಪ್ಪಿಗೆ ಸೂಚಿಸಿದೆ.

ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್ ಕೇಂದ್ರೀಕೃತ ಟೆಂಡರ್ ವ್ಯವಸ್ಥೆಯಡಿ ಮೊಟ್ಟೆ ಖರೀದಿಸಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular