HomeKarnatakaಗ್ರಾಮಾಂತರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮಾಂತರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ :  ಬಳ್ಳಾರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಗೆ ಬರುವ ಬಳ್ಳಾರಿ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಗೌರವ ಸೇವಾ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಬಳ್ಳಾರಿ ಗ್ರಾಮಾಂತರ ಯೋಜನೆಯ ವ್ಯಾಪ್ತಿಯಲ್ಲಿ ಒಟ್ಟು 11 ಅಂಗನವಾಡಿ ಕಾರ್ಯಕರ್ತೆ ಹಾಗೂ 46 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. ಆಯಾ ಗ್ರಾಮ ಅಥವಾ ವಾರ್ಡ್ನ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

 ಖಾಲಿ ಇರುವ ಹುದ್ದೆಗಳ ವಿವರಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಂಬಂಧಪಟ್ಟ ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯತ್, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಮುಚ್ಚಿದ ಲಕೋಟೆಯಲ್ಲಿ (ರಜಾ ದಿನಗಳನ್ನು ಹೊರತುಪಡಿಸಿ) 15-10-2026 ರ ಸಂಜೆ 5:30 ರೊಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಳ್ಳಾರಿ (ಗ್ರಾಮಾಂತರ) ದೂರವಾಣಿ ಸಂಖ್ಯೆ: 8971982008, 08392-266080 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಅಲೆಮಾರಿ ಸಮುದಾಯದ ವಸತಿ ಯೋಜನೆ: ಬಳ್ಳಾರಿ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

 ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ 2021-22ನೇ ಸಾಲಿನ ‘ವಸತಿ ಯೋಜನೆ’ಯ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಪ್ರಸ್ತುತ ಸ್ವಂತ ನಿವೇಶನ ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಮನೆ ನಿರ್ಮಾಣಕ್ಕಾಗಿ ರಾಜೀವ್ ಗಾಂಧಿ ವಸತಿ ನಿಗಮದಿಂದ 2 ಲಕ್ಷ ರೂ. ಅನುದಾನವನ್ನು ಮಂಜೂರು ಮಾಡಿ, ಹಂತ-ಹAತವಾಗಿ ಬಿಡುಗಡೆ ಮಾಡಲಾಗುತ್ತದೆ. ಈ ಹಿಂದೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಬಾಕಿ ಉಳಿದಿರುವ ಅಭ್ಯರ್ಥಿಗಳು ಸಹ ಮರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆಸಕ್ತರು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೋಟೆ, ಬಳ್ಳಾರಿ ಅಥವಾ ದೂ: 9480843023 ಸಂಖ್ಯೆಯನ್ನು ಸಂಪರ್ಕಿಸಬಹುದು.

ಮಧ್ಯವರ್ತಿಗಳ ಮೂಲಕ ಅರ್ಜಿ ಸಲ್ಲಿಸುವುದು ಅಥವಾ ಮಧ್ಯವರ್ತಿಗಳ ಹಸ್ತಕ್ಷೇಪ ಕಂಡುಬಂದಲ್ಲಿ ಅಂತಹ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular