HomeKarnatakaಜಾಗ ಖಾಲಿ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ತಾಕೀತು: ಪೊಲೀಸ್ ಮೂಲಕ ಹೋರಾಟ ಹತ್ತಿಕ್ಕಲು ಮುಂದಾಯ್ತಾ ಸರ್ಕಾರ..?

ಜಾಗ ಖಾಲಿ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ತಾಕೀತು: ಪೊಲೀಸ್ ಮೂಲಕ ಹೋರಾಟ ಹತ್ತಿಕ್ಕಲು ಮುಂದಾಯ್ತಾ ಸರ್ಕಾರ..?

ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದು, ಇಂದು ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಕೊರೆಯುವ ಚಳಿಯಲ್ಲಿಯೂ ಮೂಲಸೌಕರ್ಯಗಳಿಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸಿದ್ದು, ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕಲು ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ, ಫ್ರೀಡಂ ಪಾರ್ಕ್ ಖಾಲಿ ಮಾಡುವಂತೆ ತಾಕೀತು ಮಾಡಲಾಗಿದೆ. ಶಾಮಿಯಾನದವರಿಗೂ ಪೊಲೀಸರು ಹೆದರಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಪ್ರತಿಭಟನೆ ನಿಲ್ಲಿಸದಿದ್ದರೆ ಕೇಸ್ ದಾಖಸಲಾಗುವುದು ಎಂದು ಹೋರಾಟ ನಿರದ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗಿದೆ. ಸಿದ್ದರಾಮಯ್ಯ ಸರ್ಕಾರ ನಮ್ಮ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದೆ. ಹೆಣ್ಣು ಒಲಿದರೆ ನಾರಿ ಮುನಿದರೆ ಮಾರಿ ಎಂದು ಸರ್ಕಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಾರ್ನಿಂಗ್ ಮಾಡಿದ್ದಾರೆ. ನಾಳೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಗೆ ಅಂಗನವಾಡಿ ಕಾರ್ಯಕರ್ತೆಯರು ಆಗಮಿಸಲಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular