ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ: ಮೇ 11 ರಿಂದ ಬೇಸಿಗೆ ರಜೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿ ಆದೇಶಿಸಲಾಗಿದೆ.

ಕಲ್ಯಾಣ ಕರ್ನಾಟಕಕ್ಕೆ ಅನ್ವಯವಾಗಿದ್ದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆಯನ್ನು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ.

ಬೇಸಿಗೆ ಬಿಸಿಲು ಹೆಚ್ಚಾಗಿದ್ದರಿಂದ ಕಲ್ಯಾಣ ಕರ್ನಾಟಕ ಭಾಗದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯವನ್ನು ಬೆಳಗ್ಗೆ 8ರಿಂದ ಮಧ್ಯಾಹ್ನ 12 ಗಂಟೆವರೆಗೆ ನಿಗದಿಪಡಿಸಲಾಗಿತ್ತು. ಉಳಿದ ಜಿಲ್ಲೆಗಳಲ್ಲಿ ಕೂಡ ಬಿಸಿಲು ಹೆಚ್ಚಾಗಿರುವುದರಿಂದ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆಗೆ ಮನವಿ ಮಾಡಲಾಗಿದ್ದ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಮೇ 10ರವರೆಗೆ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳು ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕಾರ್ಯ ನಿರ್ವಹಿಸಲಿವೆ.

ಮೇ 11 ರಿಂದ 26ರ ವರೆಗೆ ಅಂಗನವಾಡಿ ಸಿಬ್ಬಂದಿಗೆ ಬೇಸಿಗೆ ರಜೆ ನೀಡಲಾಗಿದೆ. ಮೇ 27 ರಿಂದ ಎಂದಿನಂತೆ ಬೆಳಿಗ್ಗೆ 9:30 ರಿಂದ ಸಂಜೆ 4 ಗಂಟೆಯವರೆಗೂ ಕಾರ್ಯ ನಿರ್ವಹಿಸುವಂತೆ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read