HomeKarnatakaಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ: ಉಚಿತ ಸ್ಮಾರ್ಟ್ ಫೋನ್ ವಿತರಿಸಲು ಸಂಪುಟ ಒಪ್ಪಿಗೆ

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ: ಉಚಿತ ಸ್ಮಾರ್ಟ್ ಫೋನ್ ವಿತರಿಸಲು ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದ 76,000 ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಸ್ಮಾರ್ಟ್ ಫೋನ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಸ್ಮಾರ್ಟ್ ಫೋನ್ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮೀಕ್ಷೆ, ಅರ್ಜಿಗಳ ಸ್ವೀಕಾರ ಮತ್ತು ಇತರ ಮಾಹಿತಿಯನ್ನು ಭರ್ತಿ ಮಾಡಲು ನಿರ್ದೇಶಿಸಲಾಗಿದೆ. ಇದಕ್ಕೆ ಅನುಕೂಲವಾಗುವಂತೆ ಅಂಗನವಾಡಿ ಮೇಲ್ವಿಚಾರಕರು ಹಾಗೂ ಕಾರ್ಯಕರ್ತೆಯರಿಗೆ 89.61 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ಖರೀದಿಸಿ ಉಚಿತವಾಗಿ ವಿತರಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular