HomeKarnatakaಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ರೂ. ಗೌರವಧನಕ್ಕೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ...

ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ರೂ. ಗೌರವಧನಕ್ಕೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ರಾಜ್ಯದಾದ್ಯಂತ ಇಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ಕೈಗೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ ಪ್ರತಿಭಟನೆಗೆ ಕರೆ ನೀಡಿದೆ.

ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಲಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ., ಸಹಾಯಕಿಯರಿಗೆ 10,000 ರೂ. ಗೌರವ ಧನ ನೀಡುವುದಾಗಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಭರವಸೆ ನೀಡಿದ್ದು, ಈ ಭರವಸೆಯನ್ನು ಈಡೇರಿಸಬೇಕೆಂದು ಆಗ್ರಹಿಸಿ ಧರಣಿ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular