HomeLatest NewsBIG NEWS: ಪ್ರತಿಭಟನೆ ಹಿಂಪಡೆದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು

BIG NEWS: ಪ್ರತಿಭಟನೆ ಹಿಂಪಡೆದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮ್ಮ ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನ ಹೆಚ್ಚಳ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಬಗ್ಗೆ ಸಚಿವರು ಪದಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಅಂಗನವಾಡಿ ಕೇಂದ್ರಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಬಗ್ಗೆ ಸರ್ಕಾರ ಸಾಕಷ್ಟು ಕಾಳಜಿ ವಹಿಸಿದೆ. ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಅಂಗನವಾಡಿ ನೌಕರರ ಹಿತರಕ್ಷಣೆಗೆ ಬದ್ಧ ಎಂದು ಸಚಿವರು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಅಂಗನವಾಡಿ ನೌಕರರು ಪ್ರತಿಭಟನೆ ಹಿಂಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular