HomeKarnatakaBREAKING NEWS: ಅಂಗನವಾಡಿ ಮೇಲ್ಛಾವಣಿ ಸೀಲಿಂಗ್ ಬಿದ್ದು ನಾಲ್ಕು ಮಕ್ಕಳಿಗೆ ಗಂಭೀರ ಗಾಯ

BREAKING NEWS: ಅಂಗನವಾಡಿ ಮೇಲ್ಛಾವಣಿ ಸೀಲಿಂಗ್ ಬಿದ್ದು ನಾಲ್ಕು ಮಕ್ಕಳಿಗೆ ಗಂಭೀರ ಗಾಯ

ಕೊಪ್ಪಳ: ಅಂಗನವಾಡಿ ಮೇಲ್ಛಾವಣಿ ಸೀಲಿಂಗ್ ಬಿದ್ದು 4 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮೆಹಬೂಬ ನಗರದಲ್ಲಿ ನಡೆದಿದೆ.

ಅಮನ್, ಮನ್ವಿತ್, ಮರ್ದನ್, ಸುರಕ್ಷಾ ಗಾಯಗೊಂಡಿರುವ ಮಕ್ಕಳು. ಅಂಗನವಾಡಿಯಲ್ಲಿ ಪಾಠ ಕೇಳುತ್ತಿದ್ದ ಮಕ್ಕಳ ಮೇಲೆ ಏಕಾಏಕಿ ಸೀಲಿಂಗ್ ಬಿದ್ದಿದೆ. ಗಾಯಾಳು ಮಕಕ್ಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಗನವಾಡಿ ಕಟ್ಟಡ ಕಟ್ಟಿ 7 ವರ್ಷಗಳಾಗಿತ್ತು. ಕಳಪೆ ಕಾಮಗಾರಿಯಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular