HomeLatest Newsಮನೆಯಲ್ಲಿ ಅತ್ಯಾಚಾರ ಎಸಗಿ ಅಂಗನವಾಡಿ ಸಹಾಯಕಿ ಕೊಲೆ

ಮನೆಯಲ್ಲಿ ಅತ್ಯಾಚಾರ ಎಸಗಿ ಅಂಗನವಾಡಿ ಸಹಾಯಕಿ ಕೊಲೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಿಳಿಕಿ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ.

ಗ್ರಾಮದ ಅಂಗನವಾಡಿಯಲ್ಲಿ ಸಹಾಯಕಿಯಾಗಿದ್ದ 50 ವರ್ಷದ ಮಹಿಳೆ ಮನೆಯಲ್ಲಿಯೇ ಕೊಲೆಯಾಗಿದ್ದಾರೆ. ಶನಿವಾರ ಬೆಳಗ್ಗೆ ಮಹಿಳೆಯ ಮನೆ ಬಾಗಿಲು ತೆರೆದಿದ್ದು ಅವರು ಹೊರಗೆ ಬಂದಿರಲಿಲ್ಲ. ನೆರೆ ಮನೆಯವರು ಹೋಗಿ ನೋಡಿದಾಗ ಬೆತ್ತಲೆಯಾಗಿ ಕೊಲೆಯಾದ ಸ್ಥಿತಿಯಲ್ಲಿ ನೆಲದ ಮೇಲೆ ಬಿದ್ದಿದ್ದರು.

ಮಾಹಿತಿ ತಿಳಿದ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಮಹಿಳೆಯ ಪುತ್ರ ಕೂಲಿ ಕೆಲಸಕ್ಕಾಗಿ ಬೇರೆ ಊರಿಗೆ ತೆರಳಿದ್ದರು. ಮಹಿಳೆ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಅವರ ಪತಿ ಹಿಂದೆಯೇ ಮೃತಪಟ್ಟಿದ್ದು, ಮೂವರು ಪುತ್ರಿಯರ ಮದುವೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular