ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 04 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದವರ ಪೈಕಿ 65 ಹಾಗೂ 45 ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದವರ ಪೈಕಿ 42 ಅರ್ಜಿಗಳು ಅಪೂರ್ಣವಾಗಿವೆ.
ಹಿರಿಯೂರು ತಾಲ್ಲೂಕು ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 2 ಅಂಗನವಾಡಿ ಕಾರ್ಯಕರ್ತೆ ಹುದ್ದಗೆ ಸಲ್ಲಿಸಿದ ಅರ್ಜಿಗಳ ಪೈಕಿ ಅಪೂರ್ಣಗೊಂಡ 77 ಹಾಗೂ 53 ಅಂಗನವಾಡಿ ಸಹಾಯಕಿ ಹುದ್ದೆಗೆ ಸಲ್ಲಿಸಿದ ಅರ್ಜಿಗಳ ಪೈಕಿ 56 ಅರ್ಜಿಗಳು ಅಪೂರ್ಣವಾಗಿವೆ.
ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 2 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಸಲ್ಲಿಸಿದ ಅರ್ಜಿಗಳ ಪೈಕಿ 66 ಹಾಗೂ 24 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸಲ್ಲಿಸಿದ ಅರ್ಜಿಗಳ ಪೈಕಿ 62 ಅರ್ಜಿಗಳು ಅಪೂರ್ಣವಾಗಿವೆ.
ಈ ಹಿನ್ನಲೆಯಲ್ಲಿ ನ.13 ವರೆಗೆ ಮೇಲಿನ ಅಪೂರ್ಣಗೊಂಡ ಅರ್ಜಿಗಳನ್ನು ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಪೂರ್ಣಗೊಳಿಸಲು ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅವಕಾಶ ನಿಡಲಾಗಿದೆ, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಮೊದಲನೇ ಹಂತದಲ್ಲಿ ಅರ್ಜಿ ಮಾಹಿತಿ ತುಂಬಬೇಕು. ಎರಡನೇ ಹಂತದಲ್ಲಿ ಭಾವಚಿತ್ರ ಹಾಗೂ ಸಹಿ ಅಪ್‌ಲೋಡ್ ಮಾಡಬೇಕು. ಮೂರನೇ ಹಂತದಲ್ಲಿ ದಾಖಲಾತಿಗಳನ್ನು ಅಪ್‌ಲೋಡ್ ಮಾಡಬೇಕು.
ನಾಲ್ಕನೇ ಹಂತದಲ್ಲಿ ಆಧಾರ್ ಸಂಖ್ಯೆ ನಮೂದಿಸಿ ಇ-ಹಸ್ತಾಕ್ಷರೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು. ಆ.4 ರಂದು ಹೊರಡಿಸಿದ ಅಧಿಸೂಚನೆ ನ.13 ವರೆಗೆ ಕೊನೆಯ ದಿನಾಂಕವಾಗಿದ್ದು, ಸಂಬಂಧಿಸಿದಂತೆ ದಾಖಲಾತಿಗಳನ್ನು ಮಾತ್ರ ಆಯ್ಕೆ ಸಂದರ್ಭದಲ್ಲಿ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನಾ ಕಛೇರಿ ಭೇಟಿ ನೀಡುವಂತೆ ಪ್ರಕಟಣೆ ತಿಳಿಸಿದೆ.
