GOOD NEWS: ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು: ಪೂರ್ವ ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭದ ಬಗ್ಗೆ ಇತ್ತಿಚಿಗೆ ಮಾಹಿತಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್, ಇದೀಗ ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದರು.

ಅಂಗನವಾಡಿಯ ಮೂಲ ಉದ್ದೇಶ, ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು. ಮುಖ್ಯಮಂತ್ರಿಗಳು ಈಗಾಗಲೇ ಮೌಕಿಕವಾಗಿ ಆದೇಶ ನೀಡಿದ್ದು, ಇದೇ 22 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡಲಾಗುವುದು ಎಂದರು.

ಪೌಷ್ಠಿಕ ಆಹಾರ ಯೋಜನೆಯಡಿ ಅಕ್ಕಿ, ಗೋಧಿಯನ್ನು ಕೇಂದ್ರ ಸರ್ಕಾರದ ಎಫ್‌.ಸಿ.ಐ ಮೂಲಕ, ಹಾಲಿನ ಪುಡಿಯನ್ನು ಕೆ.ಎಂ.ಎಫ್‌ ಮೂಲಕ ಖರೀದಿಸಲಾಗುತ್ತಿದೆ. ಕೋಳಿಮೊಟ್ಟೆಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸ್ಥಳೀಯವಾಗಿ ಖರೀದಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read