HomeKarnatakaಅಂಗನವಾಡಿ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಜಿಲ್ಲೆಯ 07 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 126 ಅಂಗನವಾಡಿ ಕಾರ್ಯಕರ್ತೆಯರು ಮತ್ತು 448 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬAಧಿಸಿದ ಅಂಗನವಾಡಿ, ಗ್ರಾಮ ಪಂಚಾಯತ್, ಮಹಾನಗರಪಾಲಿಕೆ, ನಗರ ಪಾಲಿಕೆ ಮತ್ತು ಪಟ್ಟಣ ಪಂಚಾಯ್ತಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಈ ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣಾ ಅರ್ಜಿಗಳನ್ನು ದಿ: 04-12-2024 ರೊಳಗಾಗಿ ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾ ಕಚೇರಿಗೆ ಸಲ್ಲಿಸಬಹುದು.

ಭದ್ರಾವತಿ ತಾಲ್ಲೂಕು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಾರ್ಯಕರ್ತೆಯರು 10, ಸಹಾಯಕಿಯರು 72, ಹೊಸನಗರ ಕಾರ್ಯಕರ್ತೆಯರು 07, ಸಹಾಯಕಿಯರು 35, ಸಾಗರ ಕಾರ್ಯಕರ್ತೆಯರು 21, ಸಹಾಯಕಿಯರು 62, ಶಿಕಾರಿಪುರ ಕಾರ್ಯಕರ್ತೆಯರು 08, ಸಹಾಯಕಿಯರು 55, ಶಿವಮೊಗ್ಗ ಕಾರ್ಯಕರ್ತೆಯರು 33, ಸಹಾಯಕಿಯರು 118, ಸೊರಬ ಕಾರ್ಯಕರ್ತೆಯರು 38, ಸಹಾಯಕಿಯರು 65 ಮತ್ತು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾರ್ಯಕರ್ತೆಯರು 09 ಹಾಗೂ ಸಹಾಯಕಿರಯರು 41 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular