HomeKarnatakaರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು : ಸೆ.15 ರಂದು ಪ್ರತಿಭಟನೆಗೆ ಕರೆ!

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು : ಸೆ.15 ರಂದು ಪ್ರತಿಭಟನೆಗೆ ಕರೆ!

ಬೆಂಗಳೂರು : ರಾಜ್ಯ ಸರ್ಕಾರವು 262 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಸಿದ್ಧತೆ ನಡೆಸಿರುವುದನ್ನು ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಸೆಪ್ಟೆಂಬರ್ 15 ಕ್ಕೆ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ರಾಜ್ಯ ಸರ್ಕಾರವು ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಮುಂದಾಗಿದೆ. ಆದರೆ ಈ ಆದೇಶದಿಂದ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಬರಲಿದೆ. ಹೀಗಾಗಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ವಿರೋಧಿಸಿ ಸೆಪ್ಟೆಂಬರ್ 15 ರಂದು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಬಾರದು, ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಿದ್ರೆ ಅಂಗನವಾಡಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗಿ ಅಂಗನವಾಡಿ ಕೇಂದ್ರಗಳು ಮುಚ್ಚುವ ಹಂತಕ್ಕೆ ಬರಬಹುದು ಹೀಗಾಗಿ ಸರ್ಕಾರ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular