ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಪಾಲ್ ನನ್ನು ಬಂಧಿಸಲಾಗಿದೆ.
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಆಪ್ತ ಸಹಾಯಕ ಹಾಗೂ ರಿಲಯನ್ಸ್ ಪವರ್ ಲಿಮಿಟೆಡ್ ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು ವಂಚನೆ ಆರೋಪದಲ್ಲಿ ಬಂಧಿಸಲಾಗಿದೆ.
17,000ಕೋಟಿ ರೂಪಾಯಿ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಕೇಸ್ ನಲ್ಲಿ ಬಂಧಿಸಲಾಗಿದೆ. ಪಾಲ್ ಅವರು 25 ವರ್ಷಗಳಿಗೂ ಹೆಚ್ಚು ಅನುಭವವುಳ್ಳ ಚಾರ್ಟೆಡ್ ಅಕೌಂಟೆಂಟ್. ಏಳು ವರ್ಷಗಳಿಗೂ ಹೆಚ್ಚು ಕಾಲ ರಿಲಯನ್ಸ್ ಪವರ್ ನಲ್ಲಿ ಮುಖ್ಯ ಹಣಕಾಸು ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.