HomeIndiaBIG NEWS: ಅನಿಲ್ ಅಂಬಾನಿಗೆ ಮತ್ತೆ ಸಮನ್ಸ್ ಜಾರಿ ಮಾಡಿದ ED

BIG NEWS: ಅನಿಲ್ ಅಂಬಾನಿಗೆ ಮತ್ತೆ ಸಮನ್ಸ್ ಜಾರಿ ಮಾಡಿದ ED

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಸಮೂಹದ ಮುಖ್ಯಸ್ಥ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತೆ ಸಮನ್ಸ್ ಜಾರಿ ಮಾಡಿದೆ.

ಫೆಬ್ರವರಿ 26ರಂದು ವಿಚಾರಣೆಗೆ ಹಾಜರಾಗುವಂತೆ ಸನ್ಸಮನ್ಸ್ ನಲ್ಲಿ ಇಡಿ ಸೂಚಿಸಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ ಅವರಿಗೆ ಫೆಬ್ರವರಿ 10 ಮತ್ತು 17ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸೂಚಿಸಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ. ಟೀನಾ ಅಂಬಾನಿಗೆ ಇ.ಡಿ ಮತ್ತೊಂದು ದಿನಾಂಕ ನೀಡ್ದೆಯೇ ಎಂಬೂದು ಸ್ಪಷ್ಟವಾಗಿಲ್ಲ. ಆದರೆ ಈಗ ಅನಿಲ್ ಅಂಬಾನಿ ಅವರಿಗೆ ಇ.ಡಿ ಮತ್ತೆ ಸಮನ್ಸ್ ಜಾರಿ ಮಾಡಿದೆ.

ರಿಲಯನ್ಸ್ ಸಮೂಹದ ಮತ್ತು ಅದರ ಬ್ಯಾಂಕ್ ಖಾತೆಗಳ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅನಿಲ್ ಅಂಬಾನಿ ಅವರನ್ನು ಕಳೆದ ವರ್ಷ ವಿಚಾರಣೆಗೆ ಒಳಪಡಿಸಿತ್ತು. ನ್ಯೂಯಾರ್ಕ್ ನಲ್ಲಿ ಐಷಾರಾಮಿ ಕಟ್ಟಡವೊಂದರ ಖರೀದ್ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಟೀನಾ ಅಂಬಾನಿ ಅವರನ್ನು ವಿಚಾರಣೆಗೆ ಕರೆಯಲಾಗಿದೆ.

ಅನಿಲ್ ಧೀರೂಭಾಯಿ ಅಂಬಾನಿ ಸಮೂಹ ವಿರುದ್ಧದ ಬ್ಯಾಂಕ್ ವಂಚನೆ ಹಾಗೂ ಅವ್ಯವಹಾರಗಳ ಕುರ್ತ ತನಿಖೆಗೆ ಇ.ಡಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular