ಬೆಂಗಳೂರು : ಅರಣ್ಯ ಇಲಾಖೆ ರಾಯಭಾರಿಯಾದ ಬೆನ್ನಲ್ಲೇ ಅನಿಲ್ ಕುಂಬ್ಳೆ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡಿದಕ್ಕೆ ಕೃತಜ್ಞತೆ ಸಲ್ಲಿಸಿದರು.
ವನ್ಯಜೀವಿ ಮತ್ತು ಅರಣ್ಯಗಳ ಬಗ್ಗೆ ಅಪಾರ ಕಾಳಜಿ ಮತ್ತು ಬದ್ಧತೆ ಹೊಂದಿರುವ ಕುಂಬ್ಳೆ ಅವರು, ಯಾವುದೇ ಸಂಭಾವನೆ ಇಲ್ಲದೆ ಅರಣ್ಯ ಹಾಗೂ ವನ್ಯಜೀವಿ ರಾಯಭಾರಿಯಾಗಿ ಸೇವೆ ಸಲ್ಲಿಸಲು ಸಮ್ಮತಿಸಿದ್ದಾರೆ. ಇದು ಅವರ ಪರಿಸರ ನಿಷ್ಠೆ ಹಾಗೂ ಸಾಮಾಜಿಕ ಬದ್ಧತೆಯ ಸ್ಪಷ್ಟ ಪ್ರತಿಬಿಂಬವಾಗಿದೆ. ಭಾರತ ಕ್ರಿಕೆಟ್ ತಂಡದ ವಿಜಯಗಳಲ್ಲಿ ಪ್ರಮುಖ ಪಾತ್ರವಹಿಸಿದ್ದ ಅವರು, ಒಂದು ಟೆಸ್ಟ್ ಪಂದ್ಯದ ಒಂದು ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಪಡೆದು ಇತಿಹಾಸ ನಿರ್ಮಿಸಿರುವ ಮಾಂತ್ರಿಕ ಬೌಲರ್. 110 ಟೆಸ್ಟ್ ಪಂದ್ಯಗಳಲ್ಲಿ 619 ವಿಕೆಟ್ ಹಾಗೂ 264 ಏಕದಿನ ಪಂದ್ಯಗಳಲ್ಲಿ 337 ವಿಕೆಟ್ ಪಡೆದು, ಕ್ರಿಕೆಟ್ ಪ್ರಿಯರ ಹೃದಯದಲ್ಲಿ ಗುರುತಿಸಿಕೊಂಡಿರುವ ಅವರು ಈಗ ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯ ಮೇಲೆಯೂ ತನ್ನ ಪ್ರಭಾವ ಬೀರುವ ವಿಶ್ವಾಸವಿದೆ. ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿದ್ದ ಅನುಭವವು ಅವರಿಗಿದೆ. ಇದೀಗ ಅವರು ರಾಯಭಾರಿ ಆಗುತ್ತಿರುವುದು ನಮ್ಮ ಇಲಾಖೆಗೆ ಹಾಗೂ ಅರಣ್ಯ ಸಂರಕ್ಷಣೆಗೆ ಇನ್ನಷ್ಟು ಬಲ ನೀಡಲಿದೆ ಎಂಬ ವಿಶ್ವಾಸ ನನಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಶ್ರೀ @anilkumble1074 ಅವರು ನನ್ನನ್ನು ಭೇಟಿ ಮಾಡಿ, ತಮ್ಮನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡಿದಕ್ಕೆ ಕೃತಜ್ಞತೆ ಸಲ್ಲಿಸಿದರು.
— Eshwar Khandre (@eshwar_khandre) June 3, 2025
ವನ್ಯಜೀವಿ ಮತ್ತು ಅರಣ್ಯಗಳ ಬಗ್ಗೆ ಅಪಾರ ಕಾಳಜಿ ಮತ್ತು ಬದ್ಧತೆ ಹೊಂದಿರುವ ಕುಂಬ್ಳೆ ಅವರು, ಯಾವುದೇ ಸಂಭಾವನೆ ಇಲ್ಲದೆ… pic.twitter.com/ooW3vh9uXA