ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಅಮೃತ ಸಿರಿ ಯೋಜನೆಯಡಿ ಜಿಲ್ಲೆಯಲ್ಲಿ ದೇಶಿ ತಳಿಗಳ (ಹಸು-ಕರುಗಳ) ಸಂರಕ್ಷಣೆಗೆ ರೈತರನ್ನು ಸಹಭಾಗಿದಾರರನ್ನಾಗಿಸುವ ಉದ್ದೇಶ ಹೊಂದಿದ್ದು, ಅರ್ಹ ರೈತರು, ದೇವದಾಸಿ ಮಹಿಳೆಯರು, ವಿಧವೆಯರು, ಶವ ಸಂಸ್ಕಾರ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತಮ್ಮ ವ್ಯಾಪ್ತಿಯ ತಾಲ್ಲೂಕಿನ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ನಿಗಧಿತ ನಮೂನೆಯ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಮೊಬೈಲ್ ಬಳ್ಳಾರಿ-9448233756, ಕಂಪ್ಲಿ-9964444527, ಕುರುಗೋಡು-7822209185, ಸಿರುಗುಪ್ಪ-7892855573 ಮತ್ತು ಸಂಡೂರು-9108334846 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:ಪಶುವೈದ್ಯ ಸೇವಾ ಇಲಾಖೆ