ಚಿರತೆ ಎಂದು ಕಂಗೆಟ್ಟಿದ್ದ ಬೆಂಗಳೂರು ನಿವಾಸಿಗಳಿಗೆ ಗುಡ್‌ ನ್ಯೂಸ್

ಬೆಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ವರದಿ ಸುತ್ತಮುತ್ತಲಿನ ಜನರಲ್ಲಿ, ವಿವಿ ವಿದ್ಯಾರ್ಥಿ ಮತ್ತು ಸಿಬ್ಬಂದಿಯಲ್ಲಿ ಹೆಚ್ಚಿನ ಭಯ ಹುಟ್ಟಿಸಿತ್ತು.

ಇದೀಗ ಅರಣ್ಯ ಅಧಿಕಾರಿಗಳು ಮತ್ತು ವನ್ಯಜೀವಿ ಕಾರ್ಯಕರ್ತರು ಇದು ದಕ್ಷಿಣ ಏಷ್ಯಾದ ಕಾಡುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಕಾಡಿನ ಬೆಕ್ಕು, ಚಿರತೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಡಿನ ಬೆಕ್ಕಿನ ಸಿಸಿಟಿವಿ ದೃಶ್ಯಾವಳಿಗಳು ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿದ್ದವು.

ಬೆಂಗಳೂರಿನ ಹೊರವಲಯದ ಅರಣ್ಯ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಅಚ್ಚರಿಯೇನಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳು ಕಾಡಿನ ಬೆಕ್ಕಿನದ್ದು. ನಾವು ವೀಡಿಯೊ ಕ್ಲಿಪ್ನ ಚೌಕಟ್ಟುಗಳನ್ನು ವಿಶ್ಲೇಷಿಸಿದ್ದೇವೆ. ಅದು ಕಾಡಿನ ಬೆಕ್ಕು ಎಂದು ಬಹಳ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read