BIG NEWS: ಅಂಜಲಿ ಹಂತಕನ ವಿರುದ್ಧ ಮತ್ತೊಂದು FIR ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಸ್ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಗಿರೀಶ್ ವಿರುದ್ಧ ಪ್ರಕರಣ ದಾಖಲಾಗಿದೆ. 6 ತಿಂಗಳ ಹಿಂದಷ್ಟೇ ವಿಸ್ವ ಅಲಿಯಾಸ್ ಗಿರೀಶ್ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮೋಸ ಮಾಡಿದ್ದ. ಹುಬ್ಬಳ್ಳಿಯ ಯಲ್ಲಾಪುರ ಓಣಿಯಲ್ಲಿನ ಅಪ್ರಾಪ್ತಳನ್ನು ಪ್ರೀತಿ-ಪ್ರೇಮ ಎಂದು ನಾಟಕವಾಡಿ ಚಿನ್ನಾಭರಣವನ್ನೂ ಆರೋಪಿ ದೋಚಿದ್ದ. ಈ ಬಗ್ಗೆ ಅಪ್ರಾಪ್ತ ಬಾಲಕಿಯ ಪೋಷಕರು ಬೆಂಡಿಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅಂಜಲಿ ಹಂತಕ ವಿಶ್ವ ಅಲಿಯಾಸ್ ಗಿರೀಶ್ ವಿರುದ್ಧ ಐಪಿಸಿ ಸೆಕ್ಷನ್ 420, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read