HomeKarnatakaBIG NEWS: ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ; ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ; ಗೃಹ...

BIG NEWS: ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ; ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ನಡೆಯಲು ಪೊಲೀಸರ ವೈಫಲ್ಯವೇ ಕಾರಣ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಲ್ಲೇ ಪ್ರಕರಣದಲ್ಲಿ ಪೊಲೀಸರ ವೈಫಲ್ಯವಿರುವ ಬಗ್ಗೆ ಸ್ವತಃ ಗೃಹ ಸಚಿವರೇ ಒಪ್ಪಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅಂಜಲಿ ಹತ್ಯೆಗೆ ಪೊಲೀಸರ ಲೋಪವೂ ಕಾರಣವಾಗಿದೆ. ಕರ್ತವ್ಯ ಲೋಪದಡಿ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಮಹಿಳಾ ಹೆಡ್ ಕಾನ್ಸ್ ಟೇಬಲ್ ರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಜ್ಜಿ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ. ಕೇವಲ ಮಾಹಿತಿ ನೀಡಿದ್ದರು. ಅಂಜಲಿ ಪೋಷಕರು ಪೊಲೀಸರಿಗೆ ಮೊದಲೇ ಮಾಹಿತಿ ನೀಡಿದ್ದೆವು ಎಂದು ತಿಳಿಸಿದ್ದಾರೆ. ಸದ್ಯ ಕೊಲೆ ಆರೋಪಿ ವಿಶ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular