ನವದೆಹಲಿ: ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಿಲ್ಲಾಧಿಅಕರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಮ್ಕೋರ್ಟ್ ಆದೇಶವನ್ನು ಜಿಲ್ಲಾಡಲಿತ ಪಾಲಿಸದ ಕಾರಣಕ್ಕೆ ಆನ್ ಲೈನ್ ನಲ್ಲಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.
ಅರ್ಚಕ ವಿದ್ಯಾದಾಸ್ ಎಂಬುವವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಆಗಸ್ಟ್ 11ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಅಂಜನಾದ್ರಿ ಬೆಟ್ಟದ ಮೇಲಿರುವ ಆಂಜನೇಯ ದೇವಸ್ಥಾನದಲ್ಲಿ ಅರ್ಚಕ ವಿದ್ಯಾದಾಸ್ ಬಾಬಾರಿಗೆ ಪೂಜೆಗೆ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಅಲ್ಲದೇ ಬೆಟ್ಟದ ಮೇಲೆ ಅವರಿಗೆ ಮೂಲಸೌಭ್ಯವಿರುವ ಕೊಠಡಿ ನೀಡಬೇಕು ಎಂದು ತಿಳಿಸಿತ್ತು. ಆದರೆ ಇತ್ತೀಚೆಗೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಬೆಟ್ಟಕ್ಕೆ ಭೇಟಿ ನೀಡಿದ್ದ ವೇಳೆ ಬೇರೊಬ್ಬ ಅರ್ಚಕರು ಪೂಜೆ ಸಲ್ಲಿಸಿದ್ದರು. ಇದಕ್ಕೆ ವಿದ್ಯಾದಾಸ್ ವಿರೋಧ ವ್ಯಕ್ತಪಡಿಸಿದ್ದರು. ಇದಾದ ಬಳಿಕ ದೇವಸ್ಥಾನದ ಹುಂಡಿ ವಿಚಾರವಾಗಿಯೂ ವಿದ್ಯಾದಾಸ್ ಬಾಬಾ ಹಾಗೂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ರಾವ್ ಮಧ್ಯೆ ಜಟಾಪಟಿ ನಡೆದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ವಿದ್ಯಾದಾಸ್ ಬಾಬಾ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.