HomeKarnatakaBIG NEWS: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಭೀಕರ ಅಪಘಾತ

BIG NEWS: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಭೀಕರ ಅಪಘಾತ

ಕೊಪ್ಪಳ: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಅಪಘಾತಕ್ಕೀಡಾಗಿ ಕಾರು ಮೂರು ಬಾರಿ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ಅರ್ಚಕ ವಿದ್ಯಾದಾಸ ಬಾಬಾ ಅವರ ತಲೆಯ ಭಾಗಕ್ಕೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಾರು ಮೂರು ಬಾರಿ ಪಲ್ಟಿಯಾಗಿ ಬಿದ್ದಿದೆ. ಅಂಜನಾದ್ರಿ ದೇಗುಲದ ಅರ್ಚಕರು ಗಾಯಗೊಂಡಿದ್ದು, ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಅದೃಷ್ಟವಶಾತ್ ಅರ್ಚಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನಿಯಂತ್ರಣ ತಪ್ಪಿ ಡಿಕ್ಕಿಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular