HomeKarnatakaಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಅಂಕಿತಾಗೆ ತಲಾ 5 ಲಕ್ಷ ರೂ. ನೀಡಿದ...

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಅಂಕಿತಾಗೆ ತಲಾ 5 ಲಕ್ಷ ರೂ. ನೀಡಿದ ಸಿಎಂ, ಡಿಸಿಎಂ: ಶಾಲೆಗೆ 1 ಕೋಟಿ ರೂ.

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಮುಧೋಳ ತಾಲೂಕಿನ ಮೆಳ್ಳಿಗೇರಿ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವೈಯಕ್ತಿಕವಾಗಿ ತಲಾ 5 ಲಕ್ಷ ರೂ. ನೀಡಿ ಸನ್ಮಾನಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ಧರಾಮಯ್ಯ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತಾ ಹಾಗೂ ದ್ವಿತೀಯ ರ್ಯಾಂಕ್  ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ. ಅವರನ್ನು ಇಂದು ಸನ್ಮಾನಿಸಿ, ಈ ಇಬ್ಬರು ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಶುಭ ಕೋರಿದೆ.

ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿದ್ದೇನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮೀಣ ಮಕ್ಕಳು ಇನ್ನಷ್ಟು ಶೈಕ್ಷಣಿಕ ಸಾಧನೆಗಳನ್ನು ಮಾಡುವಂತಾಗಲಿ, ಈ ಮಕ್ಕಳು ಓದಿದ ಶಾಲೆ ಮತ್ತಷ್ಟು ಸರ್ಕಾರಿ ಶಾಲೆಗಳಿಗೆ ಸ್ಪೂರ್ತಿಯಾಗಲಿ ಎಂದು ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular