HomeKarnatakaಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ: KSRTC ಬಸ್ ಡಿಕ್ಕಿ; ಕಾರ್ ನಲ್ಲಿದ್ದ ನಾಲ್ವರು...

ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ: KSRTC ಬಸ್ ಡಿಕ್ಕಿ; ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಕಾರವಾರ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಬಾಳೆಗುಳಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ತಮಿಳುನಾಡು ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರುಣ್ ಪಾಂಡ್ಯನ್, ನಿಪುಲ್, ಮೊಹಮ್ಮದ್ ಹಾಗೂ ಶೇಖರನ್ ಮೃತಪಟ್ಟವರು. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸ ವರ್ಷದ ಪಾರ್ಟಿಗೆ ಅವರು ಗೋವಾ ಪ್ರವಾಸಕ್ಕೆ ಹೋಗಿ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಅಂಕೋಲಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular