HomeKarnatakaವಲಸೆ ಕಾರ್ಮಿಕರಿಗೆ ಸಮರ್ಪಕ ಪಡಿತರ ವಿತರಿಸಲು 'ಅನ್ನ ಎಟಿಎಂ' ಸ್ಥಾಪನೆಗೆ ಚಿಂತನೆ

ವಲಸೆ ಕಾರ್ಮಿಕರಿಗೆ ಸಮರ್ಪಕ ಪಡಿತರ ವಿತರಿಸಲು ‘ಅನ್ನ ಎಟಿಎಂ’ ಸ್ಥಾಪನೆಗೆ ಚಿಂತನೆ

ಮೈಸೂರು: ವಲಸೆ ಕಾರ್ಮಿಕರಿಗೆ ಬೆಂಗಳೂರು ನಗರದಲ್ಲಿ ಪಡಿತರವನ್ನು ಸಮರ್ಪಕವಾಗಿ ವಿತರಿಸಲು ‘ಅನ್ನ ಎಟಿಎಂ’ ಸ್ಥಾಪಿಸಲು ಚಿಂತನೆ ನಡೆದಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಬುಧವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪಡಿತರ ವಿತರಣೆಯಲ್ಲಿ ಬಯೋಮೆಟ್ರಿಕ್ ಜೊತೆಗೆ ಒಟಿಪಿ ಪರಿಶೀಲನಾ ವ್ಯವಸ್ಥೆ ಅಳವಡಿಸಲು ಚಿಂತನೆ ನಡೆದಿದೆ. ನ್ಯಾಯಬೆಲೆ ಅಂಗಡಿಗಳ ಮಾಲೀಕರು ಗೋಧಾಮಗಳಿಂದ ಆಹಾರ ಧಾನ್ಯ ಎತ್ತುವಳಿ ಮಾಡಿದ ನಂತರ ಫಲಾನುಭವಿಗಳಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡುವ ವ್ಯವಸ್ಥೆ ತರಲಾಗುವುದು ಎಂದು ತಿಳಿಸಿದ್ದಾರೆ.

ಪಡಿತರ ವಿತರಣೆ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಲಾಗುವುದು. ನ್ಯಾಯಬೆಲೆ ಅಂಗಡಿಗಳಿಗೆ ಇ- ಪಿಒಎಸ್ ಗಾಗಿ ಪ್ರತ್ಯೇಕ ಸಿಮ್ ವಿತರಿಸಲಾಗುವುದು. ಸದ್ಯಕ್ಕೆ ಯಾವುದೇ ಪಡಿತರ ಚೀಟಿ ರದ್ದು ಮಾಡದಂತೆ ಸೂಚಿಸಲಾಗಿದೆ. ಅನರ್ಹರನ್ನು ಹೊರಹಾಕಿ, ಅರ್ಹರನ್ನು ಸೇರ್ಪಡೆ ಮಾಡಿಕೊಳ್ಳಬೇಕಿದೆ. ಬೆಲೆ ಹೆಚ್ಚಳದ ಕಾರಣದಿಂದ ಇಂದಿರಾ ಕಿಟ್ ವಿತರಣೆ ಟೆಂಡರ್ ರದ್ದು ಮಾಡಲಾಗಿದೆ. ಪ್ರಸ್ತಾವನೆಯನ್ನು ಮರು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಆದ್ಯತಾ ಪಡಿತರ ಚೀಟಿಗಳನ್ನು ಪಡೆಯಲು ಇರುವ ಮಾನದಂಡಗಳ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular