BREAKING : ಬಸವಣ್ಣ ಇನ್ಮುಂದೆ ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ : ರಾಜ್ಯ ಸರ್ಕಾರ ಘೋಷಣೆ

ಜಗಜ್ಯೋತಿ ಬಸವೇಶ್ವರ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯು ತೀರ್ಮಾನಿಸಿದೆ. ಸದ್ಯದಲ್ಲೇ ಸರ್ಕಾರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಿದೆ.

ಬಸವಣ್ಣ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಸಚಿವ ಸಂಪುಟ ಸಭೆಯು ತೀರ್ಮಾನಿಸಿದೆ. ಸಂಪುಟದಲ್ಲಿ ಯಾವುದೇ ಚರ್ಚೆಯಾಗದೇ ಎಲ್ಲರ ಸಮ್ಮತಿಯೊಂದಿಗೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದರು. ಕಾಯಕವೇ ಕೈಲಾಸ, ಅರಿವೇ ಗುರು” ಎಂದು ಸಾಮಾಜಿಕ ಪ್ರಜ್ಞೆ ಮೂಡಿಸಲು ತಮ್ಮ ಜೀವನವಿಡಿ ಶ್ರಮಿಸಿದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಅಧಿಕೃತವಾಗಿ ಘೋಷಿಸುವುದರಿಂದ ಇಡೀ ನಾಡಿಗೆ ಸಂತಸವನ್ನು ಉಂಟು ಮಾಡುವುದಲ್ಲದೇ ನಮ್ಮ ರಾಜ್ಯ ಸರ್ಕಾರದ ಗರಿಮೆಯನ್ನು ಹೆಚ್ಚಿಸಿದಂತಾಗುತ್ತದೆ. ಆದ್ದರಿಂದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಘೋಷಿಸಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಅಲ್ಲದೇ ವಿವಿಧ ಮಠಾಧೀಶರು, ನಾಯಕರು ಬಸವೇಶ್ವರ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read