HomeKarnatakaAnna Bhagya : ನವೆಂಬರ್‌ ನ `ಅನ್ನಭಾಗ್ಯ' ಹಣ ಬಂದಿದೆಯಾ ಅಂತ ಈ ರೀತಿ ಚೆಕ್...

Anna Bhagya : ನವೆಂಬರ್‌ ನ `ಅನ್ನಭಾಗ್ಯ’ ಹಣ ಬಂದಿದೆಯಾ ಅಂತ ಈ ರೀತಿ ಚೆಕ್ ಮಾಡಿ

ಬೆಂಗಳೂರು :ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಸದ್ಯ ಪಡಿತರರ ಖಾತೆಗೆ ನವೆಂಬರ್ ತಿಂಗಳ ಹಣ ವರ್ಗಾವಣೆಯಾಗಿದೆ.ಇನ್ನೂ ನಿಮ್ಮ ಖಾತೆಗೆ ಅನ್ನಭಾಗ್ಯದ ಅಕ್ಕಿ ಹಣ ಬಂದಿದೆಯೋ ಇಲ್ವೋ ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

.https://ahara.kar.nic.in/status1/status_of_dbt.aspx  ಈ ಲಿಂಕ್ ಬಳಸಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಗೆ ಭೇಟಿ ನೀಡಿ ಅಲ್ಲಿ ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ಪಡೆದುಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚೆಕ್ ಮಾಡುವುದು ಹೇಗೆ..?

1) ಆಹಾರ  ಇಲಾಖೆಯ ವೆಬ್ ಸೈಟ್ https://ahara.kar.nic.in/ ಲಾಗಿನ್ ಆಗಬೇಕು

2) ಇದರಲ್ಲಿ  ಸ್ಟೇಟಸ್ ಆಫ್ ಡಿಬಿಟಿ ಅನ್ನುವ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ.

3) ನಂತರ  ನಿಗದಿತ ಕಾಲಂ ನಲ್ಲಿ ರೇಷನ್ ಕಾರ್ಡ್ ನ ನಂಬರ್ ಕೇಳುತ್ತದೆ, ಅಂದ್ರೆ ಆರ್ ಸಿ ನಂಬರ್ನ್ನು ನಮೂದಿಸಿ

4)  ನಂತರ ನಿಮ್ಮ ರೇಷನ್ ಕಾರ್ಡ್ ನ ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ.

5) ಮುಂದಿನ  ಪುಟದಲ್ಲಿ ನಿಮ್ಮ ಅಕೌಂಟ್ಗೆ ಹಣ ಜಮಾ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಬರದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ನಿಮಗೆ ಸಿಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular