Anna Bhagya Scheme : ಪಡಿತರ ಚೀಟಿದಾರರೇ ಗಮನಿಸಿ : `ಸೆಪ್ಟೆಂಬರ್’ ತಿಂಗಳ ಹಣ ಖಾತೆಗೆ ಬಂದಿದೆಯಾ ಅಂತ ಈ ರೀತಿ ಚೆಕ್ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಪಡಿತರರ ಖಾತೆಗೆ ಸೆಪ್ಟೆಂಬರ್ ತಿಂಗಳ ಹಣ ವರ್ಗಾವಣೆಯಾಗಿದೆ.ಇನ್ನೂ ನಿಮ್ಮ ಖಾತೆಗೆ ಅನ್ನಭಾಗ್ಯದ ಅಕ್ಕಿ ಹಣ ಬಂದಿದೆಯೋ ಇಲ್ವೋ ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

https://ahara.kar.nic.in/status1/status_of_dbt.aspx ಈ ಲಿಂಕ್ ಬಳಸಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಗೆ ಭೇಟಿ ನೀಡಿ ಅಲ್ಲಿ ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ಪಡೆದುಕೊಳ್ಳಬಹುದು.

ಚೆಕ್ ಮಾಡುವುದು ಹೇಗೆ..?
1) ಆಹಾರ ಇಲಾಖೆಯ ವೆಬ್ ಸೈಟ್ https://ahara.kar.nic.in/ ಲಾಗಿನ್ ಆಗಬೇಕು
2) ಇದರಲ್ಲಿ ಸ್ಟೇಟಸ್ ಆಫ್ ಡಿಬಿಟಿ ಅನ್ನುವ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ.
3) ನಂತರ ನಿಗದಿತ ಕಾಲಂ ನಲ್ಲಿ ರೇಷನ್ ಕಾರ್ಡ್ ನ ನಂಬರ್ ಕೇಳುತ್ತದೆ, ಅಂದ್ರೆ ಆರ್ ಸಿ ನಂಬರ್ನ್ನು ನಮೂದಿಸಿ
4) ನಂತರ ನಿಮ್ಮ ರೇಷನ್ ಕಾರ್ಡ್ ನ ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ.
5) ಮುಂದಿನ ಪುಟದಲ್ಲಿ ನಿಮ್ಮ ಅಕೌಂಟ್ಗೆ ಹಣ ಜಮಾ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಬರದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ನಿಮಗೆ ಸಿಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read