Annabhagya Scheme : ರಾಜ್ಯದ ಈ 12 ಜಿಲ್ಲೆಗಳ ಫಲಾನುಭವಿಗಳಿಗೆ ಇನ್ನೂ ಸಿಕ್ಕಿಲ್ಲ ಹಣ!

 

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಬದಲಾಗಿ ಹಣ ನೀಡುವ ಯೋಜನೆಗೆ ಚಾಲನೆ ಸಿಕ್ಕಿ 1 ವಾರ ಕಳೆದರೂ ಇನ್ನೂ 12 ಜಿಲ್ಲೆಗಳ ಫಲಾನುಭವಿಗಳಿಗೆ ಈವರೆಗೆ ಹಣ ಸಿಕ್ಕಿಲ್ಲ.

ಹೌದು, ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿಯ ಬದಲಾಗಿ 170 ರೂಪಾಯಿ ಹಣ ನೀಡುವ  ಯೋಜನೆಗೆ ಚಾಲನೆ ಸಿಕ್ಕಿ 1 ವಾರ ಕಳೆದರೂ ಮಂಡ್ಯ, ತುಮಕೂರು, ಉಡುಪಿ, ಉತ್ತರ ಕನ್ನಡ ಸೇರಿದಂತೆ 12 ಜಿಲ್ಲೆಗಳ ಫಲಾನುಭವಿಗಳಿಗೆ ಈವರೆಗೂ ಹಣ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.

ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ. ವಿಜಯಪುರ, ವಿಜಯನಗರ,ಹಾವೇರಿ ಜಿಲ್ಲೆಗಳ ಫಲಾನುಭವಿಗಳಿಗೆ ಇನ್ನೂ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚವರಿ ಅಕ್ಕಿ ಬದಲಾಗಿ ಹಣ ಸಿಕ್ಕಿಲ್ಲ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read