ನಾಳೆ ಅರಮನೆ ಮೈದಾನದಲ್ಲಿ ‘ಅನ್ನಭಾಗ್ಯ’ ಯೋಜನೆ ದಶಮಾನೋತ್ಸವ ಸಂಭ್ರಮ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.

ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಉದ್ದೇಶದಿಂದ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೆ ತಂದ ಅನ್ನಭಾಗ್ಯ ಯೋಜನೆಯು ಹತ್ತು ವರ್ಷ ಪೂರೈಸುತ್ತಿರುವುದು ಖುಷಿಯ ಜೊತೆಗೆ ಸಂತೃಪ್ತಭಾವ ಮೂಡಿಸಿದೆ.

ನಾಡನ್ನು ಕೊರೊನಾ, ಬರ ಮತ್ತು ಪ್ರವಾಹ ಬಾಧಿಸಿದಾಗಲೆಲ್ಲ ಜನರ ನೆರವಿಗೆ ನಿಂತಿದ್ದು ನಮ್ಮ‌ ಅನ್ನಭಾಗ್ಯ ಕಾರ್ಯಕ್ರಮ ಎಂಬುದು ಇದರ ಯಶಸ್ಸಿಗೆ ಹಿಡಿದ ಕನ್ನಡಿ. ಇಂತಹ ಜನಪರವಾದ ಯೋಜನೆಯ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಾರ್ಥಕ ಕ್ಷಣದಲ್ಲಿ ಭಾಗಿಯಾಗಬೇಕೆಂದು ಸಿಎಂ ಸಿದ್ಧರಾಮಯ್ಯ ಕೋರಿದ್ದಾರೆ.

https://twitter.com/siddaramaiah/status/1762758325169688583

https://twitter.com/KarnatakaVarthe/status/1762810661510484429

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read