HomeKarnatakaಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ: ‘ಅನ್ನಭಾಗ್ಯ’ ಗ್ಯಾರಂಟಿ ನಗದು ಬದಲಿಗೆ 'ದಿನಸಿ ಕಿಟ್' ವಿತರಣೆ

ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ: ‘ಅನ್ನಭಾಗ್ಯ’ ಗ್ಯಾರಂಟಿ ನಗದು ಬದಲಿಗೆ ‘ದಿನಸಿ ಕಿಟ್’ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಈ ಹಣದ ಬದಲು ದಿನಸಿ ಕಿಟ್ ವಿತರಿಸಲು ಸರ್ಕಾರ ಮುಂದಾಗಿದೆ.

ಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ದಿನಸಿ ಕಿಟ್ ಗಳನ್ನೂ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ವಿತರಿಸಲು ಆಹಾರ ಇಲಾಖೆಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಕ್ಟೋಬರ್ 1ರಿಂದ ಈ ಯೋಜನೆ ಜಾರಿಗೆ ಸಿದ್ಧತೆ ನಡೆಸಿದೆ.

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಗ್ಯಾರಂಟಿ ಭರವಸೆ ನೀಡಲಾಗಿತ್ತು. ಅಕ್ಕಿ ಲಭ್ಯವಿಲ್ಲದ ಕಾರಣ 5 ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತಿದೆ. ಈಗ ಅಕ್ಕಿ ಲಭ್ಯವಿರುವುದರಿಂದ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲು ಚಿಂತನೆ ನಡೆದಿದ್ದರೂ ಸಮೀಕ್ಷೆಯಲ್ಲಿ ಶೇಕಡ 93 ರಷ್ಟು ಪಡಿತರ ಫಲಾನುಭವಿಗಳು ಹೆಚ್ಚುವರಿ 5 ಕೆಜಿ ಅಕ್ಕಿ ಹಣದ ಬದಲು ಬೇಳೆ, ಎಣ್ಣೆ ವಿತರಿಸಲು ಬೇಡಿಕೆ ಇಟ್ಟಿದ್ದಾರೆ. ಈ ನಿಟ್ಟಿನಲ್ಲಿ ಆಹಾರ ಇಲಾಖೆ ಕ್ರಮ ಕೈಗೊಂಡು ಈ ಹಣದಲ್ಲಿ ದಿನಸಿ ಕಿಟ್ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular