HomeKarnatakaBREAKING NEWS: ಅನ್ನದಾನೇಶ್ವರ ಮಠದ ಸ್ವಾಮೀಜಿ ಬರ್ಬರ ಹತ್ಯೆ ಪ್ರಕರಣ; ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

BREAKING NEWS: ಅನ್ನದಾನೇಶ್ವರ ಮಠದ ಸ್ವಾಮೀಜಿ ಬರ್ಬರ ಹತ್ಯೆ ಪ್ರಕರಣ; ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

ಮೈಸೂರು: ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ರವಿ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ತಕ್ಷಣ ಆರೋಪಿಯನ್ನು ಮೈಸೂರಿನ ಕೆ.ಆರ್.ನಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ವಾಮೀಜಿ ಆಪ್ತಸಹಾಯಕನಾಗಿದ್ದ ರವಿ ಕುಡಿತದ ದಾಸನಾಗಿದ್ದ. ಕುಡಿತ ಬಿಡುವಂತೆ ಸ್ವಾಮೀಜಿ ಬುದ್ದಿ ಹೇಳಿದ್ದರು. ಕುಡಿತಕ್ಕೆ ಸ್ವಾಮೀಜಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಸ್ವಾಮೀಜಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ 90 ವರ್ಷದ ಶಿವಾನಂದ ಸ್ವಾಮೀಜಿ ಅವರನ್ನು ಜೂನ್ 10ರಂದು ಮಠದಲ್ಲಿಯೇ ಸ್ವಾಮೀಜಿ ಆಪ್ತಸಹಾಯಕ ರವಿ ಹುಲ್ಲು ಕತ್ತರಿಸುವ ಆಯುಧದಿಂದ ಬರ್ಬರವಾಗಿ ಹತ್ಯೆಗೈದಿದ್ದ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಮಧ್ಯೆ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular