‘ಅನ್ನಪೂರ್ಣ’ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ಉಚಿತ: ಫಲಾನುಭವಿಗಳ ಪಟ್ಟಿ ಸಲ್ಲಿಸದ ಸರ್ಕಾರ

ಮೈಸೂರು: “ಕೇಂದ್ರ ಸರ್ಕಾರದ ವತಿಯಿಂದ ಅನ್ನಪೂರ್ಣ ಯೋಜನೆಯಡಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ನೀಡಲಾಗುವುದು. ಆದರೆ, ರಾಜ್ಯ ಸರ್ಕಾರದಿಂದ ಫಲಾನುಭವಿಗಳ ಪಟ್ಟಿ ಸಲ್ಲಿಸದ ಕಾರಣ ಕರ್ನಾಟಕದಲ್ಲಿ ಯೋಜನೆ ಜಾರಿಯಾಗಿಲ್ಲ.”

ಹೀಗೆಂದು ರಾಜ್ಯಸಭೆ ಸದಸ್ಯ ಮತ್ತು ಭಾರತೀಯ ಆಹಾರ ನಿಗಮದ ರಾಜ್ಯಮಟ್ಟದ ಸಲಹಾ ಸಮಿತಿ ಅಧ್ಯಕ್ಷ ಈರಣ್ಣ ಕಡಾಡಿ ಮಾಹಿತಿ ನೀಡಿದ್ದಾರೆ. ಗುರುವಾರ ಸಲಹಾ ಸಮಿತಿ ಸಭೆ ನಡೆಸಿದ ಅವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅನೇಕ ರಾಜ್ಯಗಳು ಯೋಜನೆಯ ಲಾಭ ಪಡೆದುಕೊಳ್ಳುತ್ತಿವೆ. ಆದರೆ, ನಮ್ಮಲ್ಲಿ ಹಿರಿಯ ನಾಗರಿಕರಿಗೆ ಈ ಸೌಲಭ್ಯ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಆಸಕ್ತಿ ತೋರಿಲ್ಲ. ಅರ್ಹ ಫಲಾನುಭವಿಗಳ ಪಟ್ಟಿಯನ್ನು ಕೇಂದ್ರಕ್ಕೆ ಸಲ್ಲಿಸಿದಲ್ಲಿ ಅನ್ನಪೂರ್ಣ ಯೋಜನೆ ಜಾರಿಯಾಗಿ ಉಚಿತವಾಗಿ 10 ಕೆಜಿ ಅಕ್ಕಿ ಸಿಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಲು 24 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕು. 10 ಕೆಜಿ ಕೊಡುವುದಾದರೆ 48 ಲಕ್ಷ ಮೆಟ್ರಿಕ್ ಟನ್ ಅಗತ್ಯವಿದೆ. ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಹೇಳಿದ್ದು, ರಾಜ್ಯದಲ್ಲಿಯೇ 50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನೆ ಆಗುತ್ತಿದೆ. ರಾಜ್ಯ ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಭತ್ತ ಖರೀದಿಸಿ ಬಿಪಿಎಲ್ ಕಾರ್ಡ್ 10 ಕೆಜಿ ಅಕ್ಕಿ ಕೊಡಬಹುದು. ಇದರಿಂದ ರಾಜ್ಯದ ರೈತರಿಗೂ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read